ಮುಂಬೈ: ಭಾರತ ಟೆಸ್ಟ್ ತಂಡದಲ್ಲಿ ಆರಂಭಿಕ ಬ್ಯಾಟಿಂಗ್ ಜೋಡಿಯ ಸತತ ವೈಫಲ್ಯದ ನಡುವೆ, ಇದೀಗ ಪ್ರಮುಖ ವೇಗಿ ಮೊಹಮ್ಮದ್ ಶಮಿ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ.
ಮೊಹಾಲಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ವೇಳೆ ಮೊಹಮ್ಮದ್ ಶಮಿಗೆ ಮೊಣಕಾಲು ನೋವು ಕಾಣಿಸಿಕೊಂಡಿದ್ದು, ನಾಲ್ಕನೇ ಟೆಸ್ಟ್ ಪಂದ್ಯದಿಂದ ಹೊರ ಉಳಿಯುವ ಸಾಧ್ಯತೆ ಇದೆ.
ಗುರುವಾರದಿಂದ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ಎದುರಿನ ನಾಲ್ಕನೇ ಟೆಸ್ಟ್ ಆರಂಭವಾಗಲಿದೆ.
ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೊಹಮ್ಮದ್ ಶಮಿ ಆಡುವುದರ ಬಗ್ಗೆ ಇಂದು ಸಂಜೆ ಅಧಿಕೃತ ಮಾಹಿತಿ ನೀಡುವುದಾಗಿ ನಾಯಕ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.