
ಪ್ರಜಾವಾಣಿ ವಾರ್ತೆ
ನವದೆಹಲಿ, (ಪಿಟಿಐ): ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರ, ಬ್ಯಾಟಿಂಗ್ ಕಟ್ಟಾಳು ಎಂದು ಖ್ಯಾತರಾಗಿರುವ ರಾಹುಲ್ ದ್ರಾವಿಡ್ ಅವರು ಶುಕ್ರವಾರ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಹುಲ್ ದ್ರಾವಿಡ್ ಹಾಗೂ ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್ ಅವರೊಂದಿಗೆ ಶುಕ್ರವಾರ ಜಂಟಿ ಪತ್ರಿಕಾಗೋಷ್ಟಿಯನ್ನು ನಡೆಸಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ 12.30ಕ್ಕೆ ನಡೆಯಲಿರುವ ಜಂಟಿ ಪತ್ರಿಕಾಗೋಷ್ಟಿಯಲ್ಲಿ ರಾಹುಲ್ ದ್ರಾವಿಡ್ ಅವರು ತಮ್ಮ ನಿವೃತ್ತಿ ಘೋಷಿಸಲಿದ್ದಾರೆ ಎನ್ನಲಾಗಿದೆ.
ಆದರೆ, ಇದುವರೆಗೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.