ADVERTISEMENT

ನೆಟ್ಟಕಲ್ಲಪ್ಪ ಸ್ಮಾರಕ ರಸ್ತೆ ಓಟ; ಸ್ಪರ್ಧೆಯಲ್ಲಿ ಪ್ರಮುಖರು

​ಪ್ರಜಾವಾಣಿ ವಾರ್ತೆ
Published 16 ಜೂನ್ 2012, 19:30 IST
Last Updated 16 ಜೂನ್ 2012, 19:30 IST

ರಾಮನಗರ:  ಡೆಕ್ಕನ್ ಅಥ್ಲೆಟಿಕ್ ಕ್ಲಬ್ ಆಶ್ರಯದ `ಪ್ರಜಾವಾಣಿ- ಡೆಕ್ಕನ್ ಹೆರಾಲ್ಡ್~ ಪ್ರಾಯೋಜಿತ ಕೆ.ಎ.ನೆಟ್ಟಕಲ್ಲಪ್ಪ ಸ್ಮಾರಕ ರಾಜ್ಯಮಟ್ಟದ ರಸ್ತೆ ಓಟದ ಸ್ಪರ್ಧೆ ಭಾನುವಾರ ಬೆಳಿಗ್ಗೆ ನಡೆಯಲಿದ್ದು, ಇದರಲ್ಲಿ ಪಾಲ್ಗೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ನೂರಾರು ಮಂದಿ ಓಟಗಾರರು ಇಲ್ಲಿಗೆ  ಶನಿವಾರವೇ ಆಗಮಿಸಿದ್ದಾರೆ.

ಮಹಿಳಾ ವಿಭಾಗದಲ್ಲಿ ಕಳೆದ ವರ್ಷದ ಚಾಂಪಿಯನ್ ತಿಪ್ಪವ್ವ ಸಣ್ಣಕ್ಕಿ ಸೇರಿದಂತೆ ಉತ್ತರ ಕರ್ನಾಟಕದ ಕೆಲವು ಅನುಭವಿ ಓಟಗಾರ್ತಿಯರೂ ಬಂದಿದ್ದಾರೆ.

ಸಮೀಪದ ಬೆಂಗಳೂರು, ದೂರದ ಬೀದರ್, ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಸ್ಪರ್ಧಿಗಳು ಬಂದಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಪೊಲೀಸ್ ಮುಖ್ಯಾಧಿಕಾರಿ ಅನುಪಮಾ ಅಗರವಾಲ್ ಸ್ಪರ್ಧೆಗೆ ಚಾಲನೆ ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.