
ಪ್ರಜಾವಾಣಿ ವಾರ್ತೆಕೋಲ್ಕತ್ತ: ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಡೇರ್ ಡೆವಿಲ್ಸ್ ತಂಡಗಳ ನಡುವಣ ಐಪಿಎಲ್ ಟೂರ್ನಿಯ ಪಂದ್ಯಕ್ಕೆ ಮಳೆ ಅಡ್ಡಿಯಾಯಿತು.ಇಲ್ಲಿನ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಗುರುವಾರ ಈ ಪಂದ್ಯ ನಡೆಯಬೇಕಿತ್ತು.
8.30ರ ವೇಳೆಗೆ ವರುಣ ತನ್ನ ಆರ್ಭಟವನ್ನು ನಿಲ್ಲಿಸಿದ. ಆದರೆ, ಪಿಚ್‌ನ ಸುತ್ತಲೂ ನೀರು ಇದ್ದ ಕಾರಣ ಪಂದ್ಯ ಆರಂಭಿಸಲು ಸಾಧ್ಯವಾಗಲಿಲ್ಲ. ಪತ್ರಿಕೆ ಮುದ್ರಣಕ್ಕೆ ಹೋಗುವ ವೇಳೆಗೂ ಪಂದ್ಯ ಆರಂಭಗೊಂಡಿರಲಿಲ್ಲ.
ನೈಟ್ ರೈಡರ್ಸ್ ತಂಡದ ಮಾಲೀಕ ಹಾಗೂ ಬಾಲಿವುಡ್ ನಟ ಶಾರೂಖ್ ಖಾನ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಇತರರು ಗಣ್ಯರು ಪಂದ್ಯ ನೋಡಲು ಆಗಮಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.