ADVERTISEMENT

ಪಾಕ್ ಕ್ರಿಕೆಟ್ ಅಭಿಮಾನಿಗಳಿಗೆ ಐದು ಸಾವಿರ ವೀಸಾ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2011, 19:30 IST
Last Updated 21 ಮಾರ್ಚ್ 2011, 19:30 IST

ನವದೆಹಲಿ (ಪಿಟಿಐ): ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಇನ್ನುಳಿದ ಪಂದ್ಯಗಳನ್ನು ವೀಕ್ಷಿಸಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ಭಾರತವು ಪಾಕಿಸ್ತಾನದ ಕ್ರಿಕೆಟ್ ಪ್ರೇಮಿಗಳಿಗೆ 5 ಸಾವಿರ ವೀಸಾ ನೀಡಲು ನಿರ್ಧರಿಸಿದೆ.

ತಲಾ ಒಂದು ಕ್ವಾರ್ಟರ್ ಫೈನಲ್, ಸೆಮಿಫೈನಲ್ ಹಾಗೂ ಫೈನಲ್ ಪಂದ್ಯ ಭಾರತದಲ್ಲಿ ನಡೆಯಲಿದೆ. ‘ಈ ಪಂದ್ಯಗಳ ಟಿಕೆಟ್ ಹೊಂದಿರುವವರಿಗೆ ವೀಸಾ ನೀಡಲಾಗುವುದು’ ಎಂದು ಸರ್ಕಾರ ಹೇಳಿದೆ.

ಪಾಕಿಸ್ತಾನ ಪ್ರಸಕ್ತ ಟೂರ್ನಿಯಲ್ಲಿ ಭಾರತದಲ್ಲಿ ಇದುವರೆಗೆ ಯಾವುದೇ ಪಂದ್ಯ ಆಡಿಲ್ಲ. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗೆಲುವು ಪಡೆದರೆ, ಮೊಹಾಲಿಯಲ್ಲಿ ಸೆಮಿಫೈನಲ್‌ನಲ್ಲಿ ಆಡುವ ಸಾಧ್ಯತೆಯಿದೆ.

ಮೊದಲ ಕ್ವಾರ್ಟರ್‌ಫೈನಲ್‌ನಲ್ಲಿ ಪಾಕಿಸ್ತಾನ ತಂಡ ವೆಸ್ಟ್ ಇಂಡೀಸ್ ಎದುರು, ಇನ್ನೊಂದು ಪಂದ್ಯದಲ್ಲಿ ಭಾರತ- ಆಸ್ಟ್ರೇಲಿಯಾದ ಎದುರು, ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ತಂಡಗಳು ಸೆಣಸಲಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.