ಕರಾಚಿ: ಪಾಕಿಸ್ತಾನ ತಂಡದ ನಾಯಕತ್ವದಿಂದ ಶಾಹಿದ್ ಆಫ್ರಿದಿಯನ್ನು ಅಮಾನತುಗೊಳಿಸಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಆದೇಶಕ್ಕೆ ಸಿಂಧ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಆಲ್ರೌಂಡರ್ ಆಫ್ರಿದಿ ತಮ್ಮ ವಿರುದ್ಧ ಪಿಸಿಬಿ ನೀಡಿರುವ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯವು ಮಂಗಳವಾರ ತಡೆಯಾಜ್ಞೆ ನೀಡಿದೆ.
`ಪಿಸಿಬಿಯು ತೆಗೆದುಕೊಂಡಿರು ಶಿಸ್ತಿನ ಕ್ರಮ ಮತ್ತು ಶಿಕ್ಷೆಯ ವಿರುದ್ಧ ಸಿಂಧ್ ಹೈಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದು, ಇವತ್ತು ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಎಂದು ಆಫ್ರಿದಿಯ ವಕೀಲ ಅಲಿ ಝಫರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.