ADVERTISEMENT

ಫುಟ್‌ಬಾಲ್: ಭಾರತಕ್ಕೆ ವಿಜಯ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2012, 19:30 IST
Last Updated 21 ಅಕ್ಟೋಬರ್ 2012, 19:30 IST

ನವದೆಹಲಿ (ಪಿಟಿಐ): ಭಾರತ ಮಹಿಳಾ ತಂಡದವರು ಮಲೇಷ್ಯಾದಲ್ಲಿ ಭಾನುವಾರ ಆರಂಭವಾದ ಎಎಫ್‌ಸಿ (19 ವರ್ಷದೊಳಗಿನವರು) ಫುಟ್‌ಬಾಲ್ ಚಾಂಪಿಯನ್‌ಷಿಪ್‌ನ ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದರು.

ಭಾನುವಾರ ನಡೆದ `ಎ~ ಗುಂಪಿನ ಪಂದ್ಯದಲ್ಲಿ ಭಾರತ 1-0ಗೋಲಿನಿಂದ ಬಾಂಗ್ಲಾದೇಶವನ್ನು ಮಣಿಸಿತು. ಮೊದಲಾರ್ಧದಲ್ಲಿ ಉಭಯ ತಂಡಗಳಿಂದಲೂ ಗೋಲುಗಳು ಬಂದಿರಲಿಲ್ಲ. ಆದರೆ, ದ್ವಿತೀಯಾರ್ಧದಲ್ಲಿ ಭಾರತದ ನಿಖಿಲಾ ತುಂಬೊಯಿಲ್ 76ನೇ ನಿಮಿಷದಲ್ಲಿ ಗೋಲು ಗಳಿಸಿ ಗೆಲುವಿನ ರುವಾರಿ ಎನಿಸಿದರು.

ಅಕ್ಟೋಬರ್ 24ರಂದು ನಡೆಯುವ ಎರಡನೇ ಪಂದ್ಯದಲ್ಲಿ ಭಾರತ ತಂಡ ಉಜ್ಬೇಕಿಸ್ತಾನದ ಎದುರು ಸೆಣಸಲಿದೆ. ಒಟ್ಟು ಎಂಟು ತಂಡಗಳು ಟೂರ್ನಿಯಲ್ಲಿ ಪಾಲ್ಗೊಂಡಿವೆ. ಇಲ್ಲಿ ಗೆಲುವು ಸಾಧಿಸುವ ತಂಡ ಮುಂದಿನ ವರ್ಷ ನಡೆಯಲಿರುವ ಎಎಫ್‌ಸಿ ಮಹಿಳಾ ಫುಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಆಡಲು ಆರ್ಹತೆ ಪಡೆಯಲಿದೆ. ರೌಂಡ್ ರಾಬಿನ್ ಮಾದರಿಯಲ್ಲಿ ಈ ಚಾಂಪಿಯನ್‌ಷಿಪ್ ನಡೆಯಲಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.