ಬೆಂಗಳೂರು: ಎಚ್‌ಎಎಲ್ ತಂಡ ಇಲ್ಲಿ ನಡೆಯುತ್ತಿರುವ ಬಿಡಿಎಫ್‌ಎ ಆಶ್ರಯದ ರಾಜ್ಯ ಸೂಪರ್ ಡಿವಿಷನ್ ಲೀಗ್ ಫುಟ್‌ಬಾಲ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಅನಿರೀಕ್ಷಿತ ಆಘಾತ ಅನುಭವಿಸಿತು.
ಅಶೋಕನಗರ ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಸ್ಟೂಡೆಂಟ್ಸ್ ಯೂನಿಯನ್ 1-0 ಗೋಲಿನಿಂದ ಎಚ್‌ಎಎಲ್ ತಂಡವನ್ನು ಮಣಿಸಿ ಅಚ್ಚರಿಯ ಫಲಿತಾಂಶ ನೀಡಿತು.
ಪಂದ್ಯದ 68ನೇ ನಿಮಿಷದಲ್ಲಿ ಗೋಲು ಗಳಿಸಿದ ಸಮಂತ್ ಅವರು ಸ್ಟೂಡೆಂಟ್ಸ್ ಯೂನಿಯನ್ ತಂಡದ ಗೆಲುವಿಗೆ ಕಾರಣರಾದರು.
ಎಚ್‌ಎಎಲ್ ಕೂಡಾ ನಿಧಾನವಾಗಿ ಪಂದ್ಯದ ಮೇಲೆ ಹಿಡಿತ ಸಾಧಿಸತೊಡಗಿತು. ಆರ್.ಸಿ. ಪ್ರಕಾಶ್ ಮತ್ತು ರಮೇಶ್ ಗೋಲು ಗಳಿಸುವ ಕೆಲವೊಂದು ಅವಕಾಶಗಳನ್ನು ಪಡೆದರೂ, ಚೆಂಡನ್ನು ಗುರಿ ಸೇರಿಸಲು ವಿಫಲರಾದರು.
ಧರ್ಮರಾಜ ಯೂನಿಯನ್ ಮತ್ತು ಸದರ್ನ್ ಬ್ಲೂಸ್ ತಂಡಗಳ ನಡುವಿನ `ಎ~ ಡಿವಿಷನ್ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯ ಗೋಲು ರಹಿತ ಡ್ರಾದಲ್ಲಿ ಕೊನೆಗೊಂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.