ADVERTISEMENT

ಫೈನಲ್‌ನಲ್ಲಿ ಎಡವಿದ ಭಾರತ ಮಹಿಳೆಯರು

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2011, 19:30 IST
Last Updated 23 ಅಕ್ಟೋಬರ್ 2011, 19:30 IST

ಪರ್ತ್ (ಪಿಟಿಐ): ಭಾರತ ಮಹಿಳಾ ಹಾಕಿ ತಂಡದವರು ಇಲ್ಲಿ ನಡೆದ ಲಾನ್ಸೊ ಅಂತರರಾಷ್ಟ್ರೀಯ ಸೂಪರ್ ಸರಣಿ ಹಾಕಿ ಟೂರ್ನಿಯ ಫೈನಲ್‌ನಲ್ಲಿ ಸೋಲು ಅನುಭವಿಸಿ ಬೆಳ್ಳಿಯ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಭಾನುವಾರ ನಡೆದ ಫೈನಲ್‌ನಲ್ಲಿ ಭಾರತದ ವಿರುದ್ಧ 4-1 ಗೋಲುಗಳ ಗೆಲುವು ಪಡೆದ ಅತಿಥೇಯ ಆಸ್ಟ್ರೇಲಿಯ ಚಿನ್ನದ ಪದಕ ಗೆದ್ದುಕೊಂಡಿತು.

ಸೌಂದರ್ಯ ಅವರು 9ನೇ ನಿಮಿಷದಲ್ಲಿ ತಂದಿತ್ತ ಗೋಲಿನ ನೆರವಿನಿಂದ ಭಾರತ ಮೇಲುಗೈ ಪಡೆಯಿತು. ಬಳಿಕ ತಿರುಗೇಟು ನೀಡಿದ ಆಸ್ಟ್ರೇಲಿಯಾ ಭರ್ಜರಿ ಜಯ ಗಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.