ಚಾಮರಾಜನಗರ: ಬೆಂಗಳೂರಿನ ಬನಶಂಕರಿ ಸ್ಪೋರ್ಟ್ಸ್ ಕ್ಲಬ್ ಮತ್ತು ಮೂಡುಬಿದರೆಯ ಆಳ್ವಾಸ್ ‘ಎ‘ ತಂಡವು ಭಾನುವಾರ ಇಲ್ಲಿ ಮುಕ್ತಾಯವಾದ ರಾಜ್ಯಮಟ್ಟದ ಬಾಲ್ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ರಮವಾಗಿ ಪುರುಷ ಮತ್ತು ಮಹಿಳಾ ವಿಭಾಗದ ಪ್ರಶಸ್ತಿಗಳನ್ನು ಗೆದ್ದುಕೊಂಡಿವೆ.
ಮಹಿಳೆಯರ ವಿಭಾಗದಲ್ಲಿ ಮೂಡುಬಿದರೆಯ ಆಳ್ವಾಸ್ ‘ಎ’ ತಂಡವು 21–11ರಿಂದ ಆಳ್ವಾಸ್ ಬಿ ತಂಡದ ವಿರುದ್ಧ ಜಯಿಸಿ ಪ್ರಶಸ್ತಿ ಗಳಿಸಿತು. ಮೂರನೇ ಸ್ಥಾನವನ್ನು ಆಳ್ವಾಸ್ ಸಿ ತಂಡವು ಪಡೆಯಿತು. ಪುರುಷರ ವಿಭಾಗದ ಫೈನಲ್ನಲ್ಲಿ ನಾಯಕ ವಿಜಯಕುಮಾರ್ ಅವರ ಉತ್ತಮ ಪ್ರದರ್ಶನದ ನೆರವಿನಿಂದ ಬೆಂಗಳೂರಿನ ಬನಶಂಕರಿ ಸ್ಪೋರ್ಟ್ಸ್ ಕ್ಲಬ್ 29–21ರಿಂದ ಬೆಂಗಳೂರಿನ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ತಂಡವನ್ನು ಸೋಲಿಸಿತು. ವಿಜಯನಗರ ಸ್ಪೋರ್ಟ್ಸ್ ಕ್ಲಬ್ ತಂಡವು ಮೂರನೇ ಸ್ಥಾನ ಗಳಿಸಿತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.