ADVERTISEMENT

`ಬಿಸಿಸಿಐ ಮಾಹಿತಿ ಹಕ್ಕು ಕಾಯ್ದೆಯಡಿ ಬರಬೇಕು'

​ಪ್ರಜಾವಾಣಿ ವಾರ್ತೆ
Published 6 ಜೂನ್ 2013, 19:59 IST
Last Updated 6 ಜೂನ್ 2013, 19:59 IST

ನವದೆಹಲಿ (ಪಿಟಿಐ): ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು (ಬಿಸಿಸಿಐ) ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ವ್ಯಾಪ್ತಿಯಡಿ ತರುವ ಅಗತ್ಯವಿದೆ ಎಂದು ಭಾರತ ಕ್ರೀಡಾ ಪ್ರಾಧಿಕಾರದ (ಎಸ್‌ಐಎ) ನಿರ್ದೇಶಕ ಜಿಜಿ ಥಾಮ್ಸನ್ ಪ್ರತಿಪಾದಿಸಿದ್ದಾರೆ.

ಐಪಿಎಲ್ ಆರನೇ ಆವೃತ್ತಿಯಲ್ಲಿ ಕೇಳಿ ಬಂದಿರುವ ಸ್ಪಾಟ್ ಫಿಕ್ಸಿಂಗ್ ಹಗರಣದಿಂದಾಗಿ ಕ್ರೀಡಾ ಉತ್ಸಾಹಕ್ಕೆ ತೊಡಕಾಗಿದೆ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

`ಕ್ರಿಕೆಟ್‌ನಲ್ಲಿ ಮ್ಯಾಚ್‌ಫಿಕ್ಸಿಂಗ್‌ಗೆ ಸ್ಥಾನ ಇಲ್ಲ. ಅಂತಹ ತಪ್ಪುಗಳ (ಫಿಕ್ಸಿಂಗ್) ಮೂಲಕ ಕ್ರಿಕೆಟ್‌ನ ಸೌಂದರ್ಯವನ್ನು ಏಕೆ ಹಾಳುಗೆಡವಬೇಕು' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.