ADVERTISEMENT

ಬಿ ಡಿವಿಷನ್ ಫುಟ್‌ಬಾಲ್: ಜುಪಿಟರ್ ತಂಡ ಜಯಭೇರಿ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2012, 19:30 IST
Last Updated 14 ಫೆಬ್ರುವರಿ 2012, 19:30 IST

ಬೆಂಗಳೂರು: ಜುಪಿಟರ್ ತಂಡ ಇಲ್ಲಿ ನಡೆಯುತ್ತಿರುವ ಬಿಡಿಎಫ್‌ಎ ಆಶ್ರಯದ ರಾಜ್ಯ `ಬಿ~ ಡಿವಿಷನ್ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ 2-0 ಗೋಲುಗಳಿಂದ ಗೋವನ್ಸ್ ವಿರುದ್ಧ ಜಯ ಸಾಧಿಸಿತು.

ಅಶೋಕನಗರ ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಸನತ್ (18 ಮತ್ತು 26ನೇ ನಿಮಿಷ) ಅವರು ಜುಪಿಟರ್ ತಂಡದ ಎರಡೂ ಗೋಲುಗಳನ್ನು ಗಳಿಸಿ ಗೆಲುವಿನ ರೂವಾರಿ ಎನಿಸಿದರು.

ನ್ಯಾಷನಲ್ಸ್ ಮತ್ತು ಓರಿಯಂಟಲ್ ತಂಡಗಳ ನಡುವಿನ ಪಂದ್ಯ ಗೋಲು ರಹಿತ ಡ್ರಾದಲ್ಲಿ ಕೊನೆಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.