ಕೋಲ್ಕತ್ತ: ಭಾರತದ ಖ್ಯಾತ ಜಿಮ್ನಾಸ್ಟ್ ದೀಪಾ ಕರ್ಮಾರ್ಕರ್ ಮತ್ತು ಅವರ ಕೋಚ್ ಬಿಸ್ವೇಸ್ವರ್ ನಂದಿ ಅವರನ್ನು ಪಶ್ಚಿಮ ಬಂಗಾಳ ಬೇಸ್ ಬಾಲ್ ಸಂಸ್ಥೆಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಈ ವಿಷಯ ವನ್ನು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ತ್ರಿಪುರಾದ ದೀಪಾ ಅವರು ರಿಯೊ ಒಲಿಂಪಿಕ್ಸ್ನ ಜಿಮ್ನಾಸ್ಟಿಕ್ಸ್ನಲ್ಲಿ ಕೂದಲೆಳೆ ಅಂತರದಲ್ಲಿ ಪದಕ ವಂಚಿತರಾಗಿದ್ದರು. ಬಿಸ್ವೇಸರ್ ದ್ರೋಣಾಚಾರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.