ರಿಯೊ ಡಿ ಜನೈರೊ(ಪಿಟಿಐ): ರಿಯೊ ಒಲಿಂಪಿಕ್ಸ್‌ನಲ್ಲಿ ಗೆಲುವಿನ ಆರಂಭ ಕಂಡಿದ್ದ ಭಾರತದ ಬ್ಯಾಡ್ಮಿಂಟನ್ ಆಟಗಾರ ಕೆ. ಶ್ರೀಕಾಂತ್ ಅವರು ಫ್ರೀ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.
ಭಾನುವಾರ ನಡೆದ ಪುರುಷರ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ 34 ನಿಮಿಷ ನಡೆದ ಸೆಣಸಾಟದಲ್ಲಿ ಶ್ರೀಕಾಂತ್ 21–6, 21–18ರ ನೇರ ಗೇಮ್‌ಗಳಿಂದ ವಿಶ್ವ ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನದಲ್ಲಿರುವ ಸ್ವೀಡನ್‌ನ ಹೆನ್ರಿ ಹರ್ಸ್‌ಕೈನೆನ್ ವಿರುದ್ಧ ಗೆದ್ದರು.
ವಿಶ್ವ ಕ್ರಮಾಂಕಪಟ್ಟಿಯಲ್ಲಿ 11ನೇ ಸ್ಥಾನದಲ್ಲಿರುವ ಶ್ರೀಕಾಂತ್ ಅವರು ಈ ವಿಭಾಗದಲ್ಲಿ ಭಾರತದ ಏಕೈಕ ಭರವಸೆ ಎನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.