ADVERTISEMENT

ಬ್ಯಾಡ್ಮಿಂಟನ್‌: ಸೈನಾ, ಸಿಂಧುಗೆ ಕಠಿಣ ಸವಾಲು

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2014, 19:30 IST
Last Updated 3 ಮಾರ್ಚ್ 2014, 19:30 IST

ಬರ್ಮಿಂಗ್‌ಹ್ಯಾಮ್‌ (ಪಿಟಿಐ/ಐಎಎನ್‌ಎಸ್‌): ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ಹಾಗೂ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಜಯಿಸಿರುವ ಪಿ.ವಿ.ಸಿಂಧು ಅವರು ಮಂಗಳವಾರ ಇಲ್ಲಿ ಆರಂಭವಾಗಲಿರುವ ಆಲ್‌ ಇಂಗ್ಲೆಂಡ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಕಠಿಣ ಸವಾಲು ಎದುರಿಸಬೇಕಾಗಿದೆ.

ಸೈನಾ ಅವರು ₨ 2.48 ಕೋಟಿ ಬಹುಮಾನ ಮೊತ್ತದ ಈ ಚಾಂಪಿಯನ್‌ಷಿಪ್‌ನಲ್ಲಿ ಏಳನೇ ಶ್ರೇಯಾಂಕ ಪಡೆದಿದ್ದಾರೆ. ಶ್ರೇಯಾಂಕ ಪಡೆದಿರುವ ಭಾರತದ ಏಕೈಕ ಆಟಗಾರ್ತಿ ಕೂಡ. ಹೋದ ವರ್ಷ ಈ ಚಾಂಪಿಯನ್‌ಷಿಪ್‌ನಲ್ಲಿ ಸೈನಾ ಸೆಮಿಫೈನಲ್‌ ಪ್ರವೇಶಿಸಿದ್ದರು. 2010ರಲ್ಲೂ ಅವರು ಈ ಸಾಧನೆ ಮಾಡಿದ್ದರು. ಹಲವು ತಿಂಗಳಿನಿಂದ ಪ್ರಶಸ್ತಿ ಬರ ಎದುರಿಸಿದ್ದ ನೆಹ್ವಾಲ್‌ ಜನವರಿಯಲ್ಲಿ ಲಖನೌದಲ್ಲಿ ನಡೆದ ಸೈಯದ್‌ ಮೋದಿ ಅಂತರರಾಷ್ಟ್ರೀಯ ಗ್ರ್ಯಾನ್‌ ಪ್ರಿ ಟೂರ್ನಿಯಲ್ಲಿ ಚಾಂಪಿಯನ್‌ ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.