ADVERTISEMENT

ಬ್ಯಾಡ್ಮಿಂಟನ್‌: ಸೆಮಿಫೈನಲ್‌ಗೆ ಸೈನಾ, ಪ್ರಣಯ್‌

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2018, 19:37 IST
Last Updated 27 ಏಪ್ರಿಲ್ 2018, 19:37 IST
ಬ್ಯಾಡ್ಮಿಂಟನ್‌: ಸೆಮಿಫೈನಲ್‌ಗೆ ಸೈನಾ, ಪ್ರಣಯ್‌
ಬ್ಯಾಡ್ಮಿಂಟನ್‌: ಸೆಮಿಫೈನಲ್‌ಗೆ ಸೈನಾ, ಪ್ರಣಯ್‌   

ವುಹಾನ್‌, ಚೀನಾ (ಪಿಟಿಐ): ಭಾರತದ ಸೈನಾ ನೆಹ್ವಾಲ್ ಮತ್ತು ಎಚ್‌.ಎಸ್‌.ಪ್ರಣಯ್‌ ಅವರು ಏಷ್ಯಾ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ.

ಪಿ.ವಿ.ಸಿಂಧು ಮತ್ತು ಕಿದಂಬಿ ಶ್ರೀಕಾಂತ್‌ ಅವರು ಕ್ವಾರ್ಟರ್‌ ಫೈನಲ್‌ನಲ್ಲಿ ಮುಗ್ಗರಿಸಿದ್ದಾರೆ.

ಶುಕ್ರವಾರ ನಡೆದ ಮಹಿಳೆಯರ ಸಿಂಗಲ್ಸ್‌ ವಿಭಾಗದ ಎಂಟರ ಘಟ್ಟದ ಹಣಾಹಣಿಯಲ್ಲಿ ಸೈನಾ 21–15, 21–13ರ ನೇರ ಗೇಮ್‌ಗಳಿಂದ ಕೊರಿಯಾದ ಲೀ ಜಾಂಗ್‌ ಮಿ ವಿರುದ್ಧ ಗೆದ್ದರು. ಈ ಹೋರಾಟ 43 ನಿಮಿಷ ನಡೆಯಿತು.

ADVERTISEMENT

ಮುಂದಿನ ಸುತ್ತಿನಲ್ಲಿ ಸೈನಾ, ಚೀನಾ ತೈಪೆಯ ತಿಯಾ ಜು ಯಿಂಗ್‌ ವಿರುದ್ಧ ಸೆಣಸಲಿದ್ದಾರೆ.

ಇನ್ನೊಂದು ಪಂದ್ಯದಲ್ಲಿ ಸಿಂಧು 19–21, 10–21ರಲ್ಲಿ ಕೊರಿಯಾದ ಸಂಗ್‌ ಜಿ ಹ್ಯೂನ್‌ ವಿರುದ್ಧ ಪರಾಭವಗೊಂಡರು.

ಪುರುಷರ ಸಿಂಗಲ್ಸ್‌ ವಿಭಾಗದ ಕ್ವಾರ್ಟರ್‌ ಫೈನಲ್ ಹಣಾಹಣಿಯಲ್ಲಿ ಪ್ರಣಯ್‌ 18–21, 23–21, 21–12ರಲ್ಲಿ ಕೊರಿಯಾದ ಸನ್‌ ವಾನ್‌ ಹೊ ಅವರನ್ನು ಸೋಲಿಸಿದರು.

ಸೆಮಿಫೈನಲ್‌ನಲ್ಲಿ ಪ್ರಣಯ್‌, ಚೀನಾದ ಚೆನ್‌ ಲಾಂಗ್‌ ವಿರುದ್ಧ ಆಡಲಿದ್ದಾರೆ. ಚೆನ್‌ ಅವರು ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಹೆಗ್ಗಳಿಕೆ ಹೊಂದಿದ್ದಾರೆ.

ಎಂಟರ ಘಟ್ಟದ ಇನ್ನೊಂದು ಪಂದ್ಯದಲ್ಲಿ ಶ್ರೀಕಾಂತ್‌ 12–21, 15–21ರಲ್ಲಿ ಮಲೇಷ್ಯಾದ ಲೀ ಚಾಂಗ್‌ ವೀ ಎದುರು ಮಣಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.