ಬ್ಯಾಂಕಾಕ್ (ಪಿಟಿಐ): ಸೈನಾ ನೆಹ್ವಾಲ್ ಇಲ್ಲಿ ನಡೆಯುತ್ತಿರುವ ಥಾಯ್ಲೆಂಡ್ ಓಪನ್ ಗ್ರ್ಯಾನ್ ಪ್ರಿ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಪರಾಭವಗೊಂಡಿದ್ದು, ಚಾಂಪಿಯನ್ ಪಟ್ಟ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಆದರೆ ಪುರುಷರ ವಿಭಾಗದಲ್ಲಿ ಕೆ.ಶ್ರೀಕಾಂತ್ ಸೆಮಿಫೈನಲ್ ಪ್ರವೇಶಿಸಿದ್ದಾರೆ.
ಶುಕ್ರವಾರ ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೈನಾ 21-13, 12-21, 18-21ರಲ್ಲಿ ಸಿಂಗಪುರದ ಜುವಾನ್ ಗು ಎದುರು ಪರಾಭವಗೊಂಡರು.
20 ವರ್ಷದ ಶ್ರೀಕಾಂತ್ ದಕ್ಷಿಣ ಕೊರಿಯಾದ ವಾನ್ ಹೊ ಸೊನ್ ಅವರನ್ನು 21-17,21-18 ರಲ್ಲಿ ಮಣಿಸಿದರು. ನಾಲ್ಕರ ಘಟ್ಟದ ಪಂದ್ಯದಲ್ಲಿ ಶ್ರೀಕಾಂತ್ ಅವರು ಥಾಯ್ಲೆಂಡ್‌ನ ಥಮ್ಮಸಿನ್ ಸಿತ್ತಿಕೊಮ್ ವಿರುದ್ಧ ಸೆಣಸಲಿದ್ದಾರೆ.
ಮೊದಲ ಗೇಮ್‌ನಲ್ಲಿ ಎರಡನೇ ರ‌್ಯಾಂಕ್‌ನ ಆಟಗಾರ್ತಿ ಸೈನಾ ಉತ್ತಮ ಪ್ರದರ್ಶನ ನೀಡಿದರು. ಆದರೆ ಉಳಿದ ಗೇಮ್‌ಗಳಲ್ಲಿ ಅದೇ ಮಟ್ಟದ ಆಟ ಕಾಯ್ದುಕೊಳ್ಳುವಲ್ಲಿ ಅವರು ವಿಫಲರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.