ADVERTISEMENT

ಬ್ಯಾಸ್ಕೆಟ್‌ಬಾಲ್‌: ಸುರಾನ ಕಾಲೇಜು ತಂಡಕ್ಕೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 7 ಮೇ 2018, 19:30 IST
Last Updated 7 ಮೇ 2018, 19:30 IST
ರಾಜ್ಯಮಟ್ಟದ ಅಂತರ ಕಾಲೇಜು ಬ್ಯಾಸ್ಕೆಟ್‌ಬಾಲ್‌ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದ ಸುರಾನ ಕಾಲೇಜಿನ ಪುರುಷರ ತಂಡದವರು ಟ್ರೋಫಿಯೊಂದಿಗೆ ಸಂಭ್ರಮಿಸಿದರು
ರಾಜ್ಯಮಟ್ಟದ ಅಂತರ ಕಾಲೇಜು ಬ್ಯಾಸ್ಕೆಟ್‌ಬಾಲ್‌ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿದ ಸುರಾನ ಕಾಲೇಜಿನ ಪುರುಷರ ತಂಡದವರು ಟ್ರೋಫಿಯೊಂದಿಗೆ ಸಂಭ್ರಮಿಸಿದರು   

ಬೆಂಗಳೂರು: ಅಮೋಘ ಆಟ ಆಡಿದ ಸುರಾನ ಕಾಲೇಜು ತಂಡದವರು ರೇವಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಅಂತರ ಕಾಲೇಜು ಬ್ಯಾಸ್ಕೆಟ್‌ಬಾಲ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದಾರೆ.

ಸೋಮವಾರ ನಡೆದ ಪುರುಷರ ವಿಭಾಗದ ಫೈನಲ್‌ ಹಣಾಹಣಿಯಲ್ಲಿ ಸುರಾನ ಕಾಲೇಜು 60–57 ಪಾಯಿಂಟ್ಸ್‌ನಿಂದ ಎಂ.ವಿ.ಐ.ಟಿ ತಂಡವನ್ನು ಸೋಲಿಸಿತು.

ಆರಂಭದಿಂದಲೇ ಆಕ್ರಮಣಕಾರಿ ಆಟ ಆಡಿದ ಸುರಾನ   ತಂಡದವರು 42–22ರ ಮುನ್ನಡೆಯೊಂದಿಗೆ ವಿರಾಮಕ್ಕೆ ಹೋದರು.

ADVERTISEMENT

ಮೂರು ಮತ್ತು ನಾಲ್ಕನೇ ಕ್ವಾರ್ಟರ್‌ಗಳಲ್ಲಿ ಎಂ.ವಿ.ಐ.ಟಿ ತಂಡದ ಆಟಗಾರರು ಮಿಂಚಿದರು. ಹೀಗಾಗಿ ಆಟದ ರೋಚಕತೆ ಹೆಚ್ಚಿತ್ತು. ಕೊನೆಯಲ್ಲಿ ಛಲದಿಂದ ಹೋರಾಡಿದ ಸುರಾನ ಕಾಲೇಜಿನ ಆಟಗಾರರು ಸಂಭ್ರಮದ ಹೊಳೆಯಲ್ಲಿ ಮಿಂದೆದ್ದರು.

ಇದಕ್ಕೂ ಮುನ್ನ ನಡೆದಿದ್ದ ಸೆಮಿಫೈನಲ್‌ ಪಂದ್ಯದಲ್ಲಿ ಸುರಾನ ತಂಡ 62–57 ಪಾಯಿಂಟ್ಸ್‌ನಿಂದ ಸಿಂಧಿ ಕಾಲೇಜಿನ ವಿರುದ್ಧ ಗೆದ್ದಿತ್ತು.

ಆರಂಭದಲ್ಲಿ ಎದುರಾಳಿಗಳಿಂದ ಪ್ರಬಲ ಪೈಪೋಟಿ ಎದುರಿಸಿದ ಸುರಾನ ತಂಡ ನಂತರ ಮಿಂಚಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.