ADVERTISEMENT

ಬ್ಯಾಸ್ಕೆಟ್‌ಬಾಲ್: ಮಾ. 11 ರಿಂದ ಎ ಡಿವಿಷನ್ ಲೀಗ್ ಚಾಂಪಿಯನ್‌ಷಿಪ್

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2011, 19:30 IST
Last Updated 2 ಮಾರ್ಚ್ 2011, 19:30 IST

ಬೆಂಗಳೂರು: ಕರ್ನಾಟಕ ರಾಜ್ಯ ಬ್ಯಾಸ್ಕೆಟ್‌ಬಾಲ್ ಸಂಸ್ಥೆ ಆಶ್ರಯದಲ್ಲಿ ಮಾರ್ಚ್ 11 ರಿಂದ ಏಪ್ರಿಲ್ 2ರ ವರೆಗೆ ‘ಪ್ರೊ. ಎನ್.ಸಿ. ಪರಪ್ಪ ಸ್ಮಾರಕ’ ರಾಜ್ಯ ‘ಎ’ ಡಿವಿಷನ್ ಲೀಗ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್ ಆಯೋಜಿಸಲಾಗಿದೆ.

ಚಾಂಪಿಯನ್‌ಷಿಪ್‌ನ ಪಂದ್ಯಗಳು ಕಂಠೀರವ ಕ್ರೀಡಾಂಗಣದ ಬ್ಯಾಸ್ಕೆಟ್‌ಬಾಲ್ ಅಂಗಳದಲ್ಲಿ ಪ್ರತಿ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯಾ ಬ್ಯಾಂಕ್, ಎಂಇಜಿ ಮತ್ತು ಸೆಂಟರ್, ಎಎಸ್‌ಸಿ, ಕೆಎಸ್‌ಪಿ, ಜೆಎಸ್‌ಸಿ, ಸ್ಪೋರ್ಟ್ಸ್ ಹಾಸ್ಟೆಲ್, ಯಂಗ್ ಓರಿಯನ್ಸ್ ಸ್ಪೋರ್ಟ್ಸ್ ಕ್ಲಬ್, ಎಚ್‌ಎಎಲ್, ಐಬಿಬಿಸಿ ಮತ್ತು ಸದರ್ನ್ ಬ್ಲೂಸ್ ತಂಡಗಳು ಚಾಂಪಿಯನ್‌ಷಿಪ್‌ನಲ್ಲಿ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.