ADVERTISEMENT

ಭಜ್ಜಿಗೆ ನಾಯಕತ್ವ ಬಿಟ್ಟುಕೊಟ್ಟು ಸಚಿನ್

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2012, 19:30 IST
Last Updated 2 ಏಪ್ರಿಲ್ 2012, 19:30 IST

ಮುಂಬೈ (ಪಿಟಿಐ): ಐಪಿಎಲ್ ಐದನೇ ಆವೃತ್ತಿಗೆ ನಾಯಕ ಸ್ಥಾನದ ಜವಾಬ್ದಾರಿ ಬೇಡ ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದರಿಂದ, ಹರಭಜನ್ ಸಿಂಗ್ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

`ಸಚಿನ್ ಈ ವಿಷಯ ಕುರಿತು ತಂಡದ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿದ್ದಾರೆ~ ಎಂದು ಮಂಡಳಿ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

`ನಾಯಕ ಸ್ಥಾನ ತ್ಯಜಿಸುವ ಬಗ್ಗೆ ತಂಡದ ಮಾಲೀಕರಾದ ಮುಖೇಶ್ ಹಾಗೂ ನೀತಾ ಅಂಬಾನಿ ಜೊತೆಗೂ ಮಾತನಾಡಿದ್ದೇನೆ. ಜವಾಬ್ದಾರಿಯಿಂದ ಕೊಂಚ ವಿಶ್ರಾಂತಿ ಬೇಕಿದೆ. ಹರಭಜನ್‌ಗೆ ಎಲ್ಲರೂ ಬೆಂಬಲ ನೀಡಬೇಕು~ ಎಂದು ಸಚಿನ್ ಹೇಳಿದ್ದಾರೆ.

2011ರ ಚಾಂಪಿಯನ್ಸ್ ಲೀಗ್‌ನಲ್ಲಿ ಭಜ್ಜಿ ಅವರು ಸಚಿನ್ ಅನುಪಸ್ಥಿತಿಯಲ್ಲಿ ತಂಡ ಮುನ್ನಡೆಸಿದ್ದರು. ಇದರಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಕೂಡ ಆಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.