ಬೆಂಗಳೂರು: ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಅಧ್ಯಕ್ಷ ಅನಿಲ್ ಕುಂಬ್ಳೆ ಮತ್ತು ಕಾರ್ಯದರ್ಶಿ ಜಾವಗಲ್ ಶ್ರೀನಾಥ್ ಅವರು ನಗರ ಪೊಲೀಸ್ ಕಮಿಷನರ್ ಶಂಕರ್ ಬಿದರಿ ಅವರನ್ನು ಶನಿವಾರ ಭೇಟಿ ಮಾಡಿ ಐಪಿಎಲ್ ಪಂದ್ಯಗಳ ಭದ್ರತೆಯ ಬಗ್ಗೆ ಚರ್ಚೆ ನಡೆಸಿದರು.
‘ಏಪ್ರಿಲ್ 12ರಿಂದ ಐಪಿಎಲ್ ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಈ ಪಂದ್ಯಗಳಿಗೆ ಭದ್ರತೆ ಒದಗಿಸುವ ಕುರಿತು ಚರ್ಚೆ ನಡೆಸಲಾಯಿತು. ಭದ್ರತೆಗೆ ಸಂಬಂಧಿಸಿದಂತೆ ಕುಂಬ್ಳೆ ಮತ್ತು ಶ್ರೀನಾಥ್ ಕೆಲ ಸಲಹೆ ನೀಡಿದ್ದಾರೆ. ನಾನೂ ಸಹ ಕೆಲವೊಂದು ಸಲಹೆಗಳನ್ನು ಅವರಿಗೆ ನೀಡಿದ್ದೇನೆ’ ಎಂದು ಬಿದರಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.