ADVERTISEMENT

ಭಾರತ ಮಹಿಳಾ ತಂಡದ ವಿರುದ್ಧ ಆಸ್ಟ್ರೇಲಿಯಾಕ್ಕೆ ಎಂಟು ವಿಕೆಟ್‌ ಜಯ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2018, 10:01 IST
Last Updated 12 ಮಾರ್ಚ್ 2018, 10:01 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ವಡೋದರ: ಇಲ್ಲಿನ ರಿಲಯನ್ಸ್‌ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಮೂರು ಪಂದ್ಯಗಳ ಏಕದಿನ ಕ್ರಿಕೆಟ್‌ ಸರಣಿಯ ಮೊದಲ ಹಣಾಹಣಿಯಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಬಲಿಷ್ಠ ಆಸ್ಟ್ರೇಲಿಯಾ ತಂಡದ ಎದುರು ಸೋಲು ಅನುಭವಿಸಿದೆ.

ಆಸ್ಟ್ರೇಲಿಯಾ ವಿರುದ್ಧ ಟಾಸ್‌ ಗೆದ್ದ ಭಾರತ ಮಹಿಳಾ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು.

ಭಾರತ 50 ಓವರ್‌ಗಳಲ್ಲಿ 200 ರನ್‌ ಗಳಿಸಿ ಆಲೌಟ್‌ ಆಯಿತು. ಸಾಧಾರಣ ಮೊತ್ತ ಬೆನ್ನತ್ತಿದ ಆಸ್ಟ್ರೇಲಿಯಾ ನಿಕೊಲೆ ಬೋಲ್ಟನ್‌ ಶತಕದ ಬಲದಿಂದ 32.1 ಓವರ್‌ಗಳಲ್ಲಿ ಗೆಲುವಿನ ನಗೆ ಬೀರಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.