
ಪ್ರಜಾವಾಣಿ ವಾರ್ತೆಉಡುಪಿ: ಮಣಿಪಾಲ ಬ್ಯಾಡ್ಮಿಂಟನ್ ಕ್ಲಬ್ ಆಶ್ರಯದಲ್ಲಿ 11ನೇ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಟೂರ್ನಿ ಮೇ 4 ರಿಂದ 6ರವರೆಗೆ ಮಣಿಪಾಲ ಸಿಂಡಿಕೇಟ್ ಬ್ಯಾಂಕ್ ಬ್ಯಾಡ್ಮಿಂಟನ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.
ಪುರುಷರು, ಮಹಿಳೆಯರು, ಬಾಲಕರು, ಬಾಲಕಿಯರು, ವೆಟರನ್ಸ್ ಸೇರಿ 5 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದೆ. ಪುರುಷರ, ಹಿಳೆಯರ ಮತ್ತು ಹಿರಿಯರ ವಿಭಾಗಗಳಲ್ಲಿ ಡಬಲ್ಸ್ ಸ್ಪರ್ಧೆಗಳಿದ್ದರೆ ಬಾಲಕರ 19 ವರ್ಷದೊಳಗಿನ ವಿಭಾಗದಲ್ಲಿ ಸಿಂಗಲ್ಸ್ ಮತ್ತು ಡಬಲ್ಸ್, ಬಾಲಕರ, ಬಾಲಕಿಯರ 17 ,15,13 ವರ್ಷದೊಳಗಿನ ವಿಭಾಗಗಳಲ್ಲಿ ಸಿಂಗಲ್ಸ್ ಸ್ಪರ್ಧೆ ನಡೆಯಲಿವೆ.
ಹೆಚ್ಚಿನ ಮಾಹಿತಿಗಾಗಿ ಆಶೋಕ್ ಪಣಿಯಾಡಿ (ಮೊ: 9880301268) ಅವರನ್ನು ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.