
ಪ್ರಜಾವಾಣಿ ವಾರ್ತೆಚೆನ್ನೈ: ರಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗಳಿಸಿದ್ದ ಟಿ. ಮರಿಯಪ್ಪನ್ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವನ್ ಅವರು ₹ 2 ಕೋಟಿ ಬಹುಮಾನ ನೀಡಿ ಗೌರವಿಸಿದ್ದಾರೆ.
ಶುಕ್ರವಾರ ಸೇಲಂ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪನ್ನೀರ್ ಸೆಲ್ವಂ ಅವರು ಬಹುಮಾನದ ಚೆಕ್ ವಿತರಿಸಿದರು. ಮರಿಯಪ್ಪನ್ ಅವರು ಪ್ಯಾರಾಲಿಂಪಿಕ್ಸ್ ಹೈಜಂಪ್‌ನಲ್ಲಿ ಚಿನ್ನದ ಪದಕ ಗಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.