ADVERTISEMENT

ಮಹಮ್ಮಡನ್‌ಗೆ ಗೆಲುವು

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2013, 19:30 IST
Last Updated 3 ಏಪ್ರಿಲ್ 2013, 19:30 IST

ಬೆಂಗಳೂರು: ಮೊದಲ ಪಂದ್ಯದಲ್ಲಿ ಡ್ರಾ ಸಾಧಿಸಿದ್ದ ಮಹಮ್ಮಡನ್ ಸ್ಪೋರ್ಟಿಂಗ್ ತಂಡ ಐ ಲೀಗ್ ಫುಟ್‌ಬಾಲ್ ಟೂರ್ನಿಯ ಎರಡನೇ ಡಿವಿಷನ್‌ನ ಅಂತಿಮ ಘಟ್ಟದ ಪಂದ್ಯದಲ್ಲಿ ಬುಧವಾರ 2-1ಗೋಲುಗಳಿಂದ ಲ್ಯಾಂಗ್‌ಸ್ನಿಂಗ್ ಕ್ಲಬ್ ಎದುರು ಗೆಲುವು ಸಾಧಿಸಿತು.

 ಅಶೋಕನಗರದಲ್ಲಿರುವ ರಾಜ್ಯ ಫುಟ್‌ಬಾಲ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಕೋಲ್ಕತ್ತದ ಮಹಮ್ಮಡನ್ ಸ್ಪೋರ್ಟಿಂಗ್ ತಂಡ ಪಡೆದ ಮೊದಲ ಗೆಲುವು ಇದಾಗಿದೆ. ಎರಡನೇ ಪಂದ್ಯವನ್ನಾಡುತ್ತಿರುವ ಈ ತಂಡ ತನ್ನ ಪ್ರಥಮ ಪಂದ್ಯದಲ್ಲಿ ಭವಾನಿಪುರೆ ಎದುರು ಗೋಲು ರಹಿತವಾಗಿ ಡ್ರಾ ಸಾಧಿಸಿತ್ತು.

ವಿಜಯಿ ತಂಡದ ಯೂನಿಸ್ ಬಾಲ್ತಾವೆ 52ನೇ ನಿಮಿಷದಲ್ಲಿ ಮೊದಲ ಗೋಲು ಗಳಿಸಿದರೆ, ಚಾರ್ಲೆಸ್ ಡಿ. ಪೆನಾಲ್ಟಿ ಕಾರ್ನರ್ ಮೂಲಕ 58ನೇ ನಿಮಿಷದಲ್ಲಿ ಎರಡನೇ ಗೋಲು ತಂದಿತ್ತರು. ಗುರುವಾರ ವಿಶ್ರಾಂತಿ ದಿನವಾದ ಕಾರಣ ಪಂದ್ಯಗಳು ನಡೆಯುವುದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.