ADVERTISEMENT

ಮಹಮ್ಮಡನ್ ತಂಡಕ್ಕೆ ಗೆಲುವು

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2013, 19:59 IST
Last Updated 5 ಏಪ್ರಿಲ್ 2013, 19:59 IST

ಬೆಂಗಳೂರು: ಮಹಮ್ಮಡನ್ ಸ್ಪೋರ್ಟಿಂಗ್ ತಂಡ ಐ ಲೀಗ್ ಫುಟ್‌ಬಾಲ್ ಟೂರ್ನಿಯ ಎರಡನೇ ಡಿವಿಷನ್‌ನ ಅಂತಿಮ ಘಟ್ಟದ ಶುಕ್ರವಾರದ ಪಂದ್ಯದಲ್ಲಿ 1-0ಗೋಲುಗಳಿಂದ ಸದರ್ನ್ ಸಮಿತಿ ಎದುರು ಗೆಲುವು ಸಾಧಿಸಿತು.

ಅಶೋಕನಗರದಲ್ಲಿರುವ ರಾಜ್ಯ ಫುಟ್‌ಬಾಲ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವಿಜಯಿ ತಂಡದ ಅಲ್ಫರ್ ಕೆ. 69ನೇ ನಿಮಿಷದಲ್ಲಿ ಗೋಲು ಗಳಿಸಿ ಗೆಲುವಿನ ರೂವಾರಿ ಎನಿಸಿದರು.

ಲ್ಯಾಂಗ್‌ಸ್ನಿಂಗ್ ಹಾಗೂ ಭಾವನಿಪುರೆ ತಂಡಗಳ ನಡುವಿನ ದಿನದ ಇನ್ನೊಂದು ಪಂದ್ಯವು 3-3ಗೋಲುಗಳಿಂದ ಡ್ರಾದಲ್ಲಿ ಅಂತ್ಯ ಕಂಡಿತು.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.