ADVERTISEMENT

ಮಾಧ್ಯಮಗಳ ವರದಿ ನಿರಾಕರಿಸಿದ ವೀರೇಂದ್ರ ಸೆಹ್ವಾಗ್

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2014, 19:30 IST
Last Updated 20 ಮಾರ್ಚ್ 2014, 19:30 IST

ನವದೆಹಲಿ (ಪಿಟಿಐ): ಸ್ಫೋಟಕ ಬ್ಯಾಟ್ಸ್‌ಮನ್‌ ವೀರೇಂದ್ರ ಸೆಹ್ವಾಗ್‌ ಅವರು ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ  ಕಾಂಗ್ರೆಸ್‌     ಅಭ್ಯರ್ಥಿ ಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ     ಮಾಧ್ಯಮ ಗಳ ವರದಿಯನ್ನು ಸೆಹ್ವಾಗ್‌ ನಿರಾಕರಿಸಿದ್ದಾರೆ.

‘ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಮಾಧ್ಯಮದವರು ಏಕೆ  ಈ ರೀತಿ ಅನಗತ್ಯವಾಗಿ ಸುದ್ದಿ ಪ್ರಸಾರ ಮಾಡುತ್ತಿದ್ದಾರೆ ಎಂಬುದು ನನಗೆ ತಿಳಿಯುತ್ತಿಲ್ಲ’ ಎಂದು ವೀರೂ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

‘ನೀವು ಸ್ಪರ್ಧಿಸಿದರೆ  ನಾನು ನಿಮಗೇ ಓಟು ಹಾಕುತ್ತೇನೆ’ ಎಂದು ಇಂಗ್ಲೆಂಡ್‌ ಕ್ರಿಕೆಟಿಗ ಕೆವಿನ್‌ ಪೀಟರ್ಸನ್‌ ಅವರು ತಮಾಷೆಯ ಟ್ವೀಟ್‌  ಮಾಡಿದ್ದಾರೆ.
ಸೆಹ್ವಾಗ್‌ಗೆ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ನೀಡಲಿದೆ ಎಂದು ಈ ಹಿಂದೆ ಮಾಧ್ಯಮಗಳು ವರದಿ ಮಾಡಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.