ADVERTISEMENT

ಮಾರ್ಚ್ ಒಂದರಿಂದ ಕ್ರೀಡಾ ಉತ್ಸವ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2012, 19:30 IST
Last Updated 18 ಫೆಬ್ರುವರಿ 2012, 19:30 IST

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ಒಲಿಂಪಿಕ್ ಸಂಸ್ಥೆ ಆಶ್ರಯದಲ್ಲಿ ಮಾರ್ಚ್ 1ರಿಂದ  3ರ ವರೆಗೆ ಮೊದಲ ವರ್ಷದ 2012ರ ಒಲಿಂಪಿಕ್ಸ್ ಕ್ರೀಡಾ ಉತ್ಸವ ನಡೆಯಲಿದೆ.

ಈ ಉತ್ಸವದ ಪಂದ್ಯಗಳು ಬಸವೇಶ್ವರ ನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರುಗಲಿವೆ. ಫುಟ್‌ಬಾಲ್, ವಾಲಿಬಾಲ್, ಬ್ಯಾಸ್ಕೆಟ್‌ಬಾಲ್ ಹಾಗೂ ಥ್ರೋ ಬಾಲ್ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಆಸಕ್ತಿ ಪದವಿ ಕಾಲೇಜಿನ ತಂಡಗಳು ರಘು (9060047225, 9880190973) ಅವರನ್ನು ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.