ADVERTISEMENT

ಮುಂದುವರಿದ ಜಯದ ದಾಖಲೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2013, 19:59 IST
Last Updated 15 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಭಾರತ ‘ಎ’ ತಂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡಿದ ಎಲ್ಲಾ ಏಕದಿನ ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದ ದಾಖಲೆ ಹೊಂದಿದೆ. ಆ ದಾಖಲೆಗೆ ವೆಸ್ಟ್‌ ಇಂಡೀಸ್‌ ‘ಎ’ ತಂಡದ ಎದುರಿನ ಪಂದ್ಯದಲ್ಲಿ ಭಾನುವಾರ ಪಡೆದ ಗೆಲುವೂ ಸೇರ್ಪಡೆಯಾಯಿತು.

ಈ-- ಕ್ರೀಡಾಂಗಣದಲ್ಲಿ ಭಾರತ ‘ಎ’ ಇದುವರೆಗೂ ನಾಲ್ಕು ಏಕದಿನ ಪಂದ್ಯಗಳನ್ನು ಆಡಿದೆ. 2004ರಲ್ಲಿ ಇಂಗ್ಲೆಂಡ್‌ ‘ಎ’ ತಂಡದ ಎದುರು ಮೂರು ಪಂದ್ಯಗಳ ಸರಣಿಯನ್ನು ಆಡಿತ್ತು. ಆ ಮೂರು ಪಂದ್ಯಗಳಲ್ಲಿಯೂ ಆತಿಥೇಯರೇ ಗೆಲುವು ಸಾಧಿಸಿದ್ದರು.

ಇಂಗ್ಲೆಂಡ್‌ ‘ಎ’ ತಂಡದ ಎದುರಿನ ಮೊದಲ ಪಂದ್ಯದಲ್ಲಿ 55 ರನ್‌, ಎರಡನೇ ಪಂದ್ಯದಲ್ಲಿ ಎರಡು ವಿಕೆಟ್‌ ಮತ್ತು ಮೂರನೇ ಪಂದ್ಯದಲ್ಲಿ ಭಾರತ ಐದು ವಿಕೆಟ್‌ ಗೆಲುವು ದಾಖಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.