ADVERTISEMENT

ಮುಂಬೈ ತಂಡ ಸೇರಿಕೊಂಡ ಮಾಲಿಂಗ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2013, 19:59 IST
Last Updated 7 ಏಪ್ರಿಲ್ 2013, 19:59 IST

ಮುಂಬೈ (ಪಿಟಿಐ): ಐಪಿಎಲ್‌ನ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ಮುಂಬೈ ಇಂಡಿಯನ್ಸ್ ತಂಡದ ವೇಗಿ ಲಸಿತ್ ಮಾಲಿಂಗ ಭಾನುವಾರ ತಂಡವನ್ನು ಸೇರಿಕೊಂಡಿದ್ದಾರೆ.

ಡೆಲ್ಲಿ ಡೇರ್‌ಡೆವಿಲ್ಸ್ ವಿರುದ್ಧ ಏಪ್ರಿಲ್ 9ರಂದು ನಡೆಯಲಿರುವ ಪಂದ್ಯದಲ್ಲಿ ಶ್ರೀಲಂಕಾದ ಆಟಗಾರ ಆಡುವ ಸಾಧ್ಯತೆಯಿದೆ. ಮುಂಬೈ ತಂಡ ತನ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೋಲು ಕಂಡರೆ, ಶನಿವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರು ಗೆಲುವು ಸಾಧಿಸಿತ್ತು.

`ಮಾಲಿಂಗ ತಂಡವನ್ನು ಸೇರಿಕೊಂಡಿದ್ದಾರೆ. ತವರಿನ ಅಂಗಣದಲ್ಲಿ ನಡೆಯಲಿರುವ ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಅವರು ಲಭ್ಯರಾಗುವ ಸಾಧ್ಯತೆಯಿದೆ. ಈ ವೇಳೆಗೆ ಅವರು ಫಿಟ್ ಆಗಲಿದ್ದಾರೆ' ಎಂದು ಇಂಡಿಯನ್ಸ್ ತಂಡದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT