ನವದೆಹಲಿ (ಪಿಟಿಐ): ಭಾರತದ ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಎಂ.ಸಿ. ಮೇರಿ ಕೋಮ್ ಹಾಗೂ ಅಂತರರಾಷ್ಟ್ರೀಯ ಪ್ಯಾರಾ ಅಥ್ಲೀಟ್ ದೀಪಾ ಮಲಿಕ್ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ತನ್ನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಅಂಗವಾಗಿ ನೀಡಿದ ‘ವರ್ಷದ ಮಹಿಳೆ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಗುರುವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೋಮ್ ಹಾಗೂ ದೀಪಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಒಟ್ಟು 25 ಮಹಿಳೆಯರಿಗೆ ಪ್ರಶಸ್ತಿ ನೀಡಲಾಯಿತು.
‘ವಿವಿಧ ವಲಯಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರ ಜೊತೆಗೆ ಸಮಾರಂಭದಲ್ಲಿ ಪಾಲ್ಗೊಂಡಿರು ವುದು ಹೆಮ್ಮೆಯ ವಿಚಾರ. ನಮ್ಮ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿದ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ಗೆ ನಾನು ಕೃತಜ್ಞಳಾಗಿದ್ದೇನೆ. ಇದು ನನ್ನ ಪಾಲಿಗೆ ಶ್ರೇಷ್ಠ ಗೌರವ’ ಎಂದು ಕೋಮ್ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.