ADVERTISEMENT

ಮೊದಲ ಕ್ವಾಲಿಫೈಯರ್‌ ಪಂದ್ಯ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ

ಏಜೆನ್ಸೀಸ್
Published 22 ಮೇ 2018, 13:26 IST
Last Updated 22 ಮೇ 2018, 13:26 IST
ಮೊದಲ ಕ್ವಾಲಿಫೈಯರ್‌ ಪಂದ್ಯ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ
ಮೊದಲ ಕ್ವಾಲಿಫೈಯರ್‌ ಪಂದ್ಯ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ   

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಕ್ರಿಕೆಟ್ ಟೂರ್ನಿಯ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ಫೀಲ್ಡಿಂಗ್ ಆಯ್ದುಕೊಂಡಿದೆ.

ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿರುವ ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ಮಧ್ಯೆ ಹಣಾಹಣಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಫೈನಲ್‌ ಪ್ರವೇಶಿಸಲು ನೇರ ಅರ್ಹತೆ ದೊರೆಯಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶವಿದೆ. ಸೋತ ತಂಡ ಎಲಿಮಿನೇಟರ್‌ ಪಂದ್ಯದಲ್ಲಿ ಗೆದ್ದ ತಂಡವನ್ನು 2ನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಎದುರಿಸಿ ಗೆಲ್ಲಬೇಕಿದೆ.

ಈ ಬಾರಿಯ ಲೀಗ್‌ನ ಅತ್ಯಂತ ಯಶಸ್ವಿ ನಾಯಕರೆನಿಸಿಕೊಂಡಿರುವ ಮಹೇಂದ್ರ ಸಿಂಗ್‌ ದೋನಿ ಮತ್ತು ಕೇನ್‌ ವಿಲಿಯಮ್ಸನ್‌ ಮುಖಾಮುಖಿಯಾಗಿರುವುದು ಪಂದ್ಯದ ಬಗೆಗಿನ ಕುತೂಹಲ ಹೆಚ್ಚುವಂತೆ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.