ADVERTISEMENT

ರಬಾಡಗೆ ದಂಡ ಸಾಧ್ಯತೆ

ಏಜೆನ್ಸೀಸ್
Published 12 ಮಾರ್ಚ್ 2018, 19:22 IST
Last Updated 12 ಮಾರ್ಚ್ 2018, 19:22 IST

ಪೋರ್ಟ್‌ ಎಲಿಜಬೆತ್‌ : ಕ್ರೀಡಾ ಸ್ಫೂರ್ತಿಗೆ ವಿರುದ್ಧವಾಗಿ ನಡೆದುಕೊಂಡ ಕಾರಣ ದಕ್ಷಿಣ ಆಫ್ರಿಕಾದ ವೇಗದ ಬೌಲರ್‌ ಕಗಿಸೊ ರಬಾಡ ಮೇಲೆ ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಪಂದ್ಯದ ಸಂಭಾವನೆಯ ಶೇಕಡ 50 ರಷ್ಟು ದಂಡ ವಿಧಿಸುವ ಸಾಧ್ಯತೆ ಇದೆ.

ಎರಡನೇ ಟೆಸ್ಟ್‌ ಪಂದ್ಯದ ಮೂರನೇ ದಿನದಾಟದ ವೇಳೆ ಆಸ್ಟ್ರೇಲಿಯಾದ ಡೇವಿಡ್‌ ವಾರ್ನರ್‌ ಅವರನ್ನು ಬೌಲ್ಡ್‌ ಮಾಡಿದ್ದ ರಬಾಡ, ಬಳಿಕ ಅವರನ್ನು ಹೀಯಾಳಿಸಿದ್ದರು. ಈ ಮೂಲಕ ಐಸಿಸಿ ನಿಯಮವನ್ನು ಉಲ್ಲಂಘಿಸಿದ್ದರು.

ರಬಾಡ, ಮೊದಲ ದಿನದಾಟದ ವೇಳೆ ಆಸ್ಟ್ರೇಲಿಯಾದ ಸ್ಟೀವ್‌ ಸ್ಮಿತ್‌ ಅವರನ್ನು ಉದ್ದೇಶಪೂರ್ವಕವಾಗಿ ತಳ್ಳಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಅವರು ಭಾನುವಾರ ಐಸಿಸಿ ಪಂದ್ಯದ ರೆಫರಿ ಜೆಫ್‌
ಕ್ರೋವ್‌ ಎದುರು ವಿಚಾರಣೆಗೆ ಹಾಜರಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.