ADVERTISEMENT

ರೈಲ್ವೆ ರಣಜಿ ತಂಡಕ್ಕೆ ನಿತಿನ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2012, 19:30 IST
Last Updated 4 ಅಕ್ಟೋಬರ್ 2012, 19:30 IST

ಹುಬ್ಬಳ್ಳಿ: ಧಾರವಾಡದ ಎಸ್‌ಡಿಎಂ ಕ್ರಿಕೆಟ್ ಅಕಾಡೆಮಿಯ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ನಿತಿನ್ ಭಿಲ್ಲೆ ರೈಲ್ವೆ ರಣಜಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಪ್ರಸಕ್ತ ಸಾಲಿನ ರಣಜಿ ಋತು ಇದೇ ನವೆಂಬರ್‌ನಲ್ಲಿ ಆರಂಭಗೊಳ್ಳಲಿದೆ. ಕಳೆದ ರಣಜಿ ಋತುವಿನಲ್ಲೂ ರೈಲ್ವೆ ತಂಡದಲ್ಲಿ ಸ್ಥಾನ ಪಡೆದಿದ್ದ ಅವರು ಉತ್ತರ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಶತಕ ದಾಖಲಿಸಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.