ADVERTISEMENT

ರೋಹಿತ್‌ಗೆ ಬಡ್ತಿ

​ಪ್ರಜಾವಾಣಿ ವಾರ್ತೆ
Published 24 ಜನವರಿ 2016, 19:30 IST
Last Updated 24 ಜನವರಿ 2016, 19:30 IST
ರೋಹಿತ್‌ಗೆ ಬಡ್ತಿ
ರೋಹಿತ್‌ಗೆ ಬಡ್ತಿ   

ದುಬೈ (ಪಿಟಿಐ):  ಭಾರತದ  ರೋಹಿತ್‌ ಶರ್ಮಾ ಅವರು ಭಾನುವಾರ ಐಸಿಸಿ ಬಿಡುಗಡೆ ಮಾಡಿರುವ ನೂತನ ವಿಶ್ವ ಕ್ರಮಾಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ. ಇದು ಅವರ ವೃತ್ತಿ ಜೀವನದ ಶ್ರೇಷ್ಠ ರ್‍ಯಾಂಕಿಂಗ್‌ ಎನಿಸಿದೆ.

ಶನಿವಾರ ಕೊನೆಗೊಂಡ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ರೋಹಿತ್‌ ಅಮೋಘ ಸಾಮರ್ಥ್ಯ ತೋರಿದ್ದರು. ಐದು ಪಂದ್ಯಗಳಿಂದ  441ರನ್‌ ಗಳಿಸಿ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾಗಿದ್ದರು.

ಮೊದಲ ಎರಡು ಪಂದ್ಯಗಳಲ್ಲಿ ಶತಕ ಸಿಡಿಸಿದ್ದ ರೋಹಿತ್‌ ಅಂತಿಮ ಪಂದ್ಯದಲ್ಲಿ 99 ರನ್‌ ಗಳಿಸಿದ್ದರು.  ಸರಣಿಯಲ್ಲಿ  ಉತ್ತಮ ಪ್ರದರ್ಶನ ತೋರಿದ್ದರಿಂದ ರೋಹಿತ್‌ಗೆ ಒಟ್ಟು 59 ರ್‍ಯಾಂಕಿಂಗ್‌ ಪಾಯಿಂಟ್ಸ್‌ ಲಭಿಸಿವೆ. ರೋಹಿತ್‌ ಎಂಟು ಸ್ಥಾನ ಮೇಲೇರಿ ಐದನೇ ಸ್ಥಾನಕ್ಕೆ ಬಡ್ತಿ ಹೊಂದಿದ್ದಾರೆ.

ಭಾರತ ತಂಡದ ಉಪನಾಯಕ ವಿರಾಟ್‌ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ.   ಮಹಿ 13ನೇ ಸ್ಥಾನಕ್ಕೆ ಇಳಿದಿದ್ದಾರೆ. ಅಜಿಂಕ್ಯ ರಹಾನೆ ಮೂರು ಸ್ಥಾನ ಮೇಲೇರಿ 25ನೇ ಸ್ಥಾನ ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್‌  ಅಗ್ರಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.