
ಪ್ರಜಾವಾಣಿ ವಾರ್ತೆದುಬೈ (ಐಎಎನ್‌ಎಸ್): ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಆಘಾತ ಅನುಭವಿಸಿದ ಭಾರತ ತಂಡ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ರ‌್ಯಾಂಕಿಂಗ್ ಪಟ್ಟಿಯಲ್ಲಿ ಕುಸಿತ ಕಂಡಿದೆ.
118 ರೇಟಿಂಗ್ ಪಾಯಿಂಟ್ ಹೊಂದಿ `ಮಹಿ~ ಪಡೆ ಎರಡನೇ ಸ್ಥಾನದಲ್ಲಿತ್ತು. ಶುಕ್ರವಾರದ ಪಂದ್ಯದಲ್ಲಿ ಸೋಲು ಕಂಡ ಕಾರಣ ಈಗ ಮೂರನೇ ಸ್ಥಾನಕ್ಕೆ ಕುಸಿದಿದೆ. ಈಗ 116 ಪಾಯಿಂಟ್ ಮಾತ್ರ ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.