ADVERTISEMENT

ವಾಲಿಬಾಲ್: ಭಾರತಕ್ಕೆ ಮೊದಲ ಗೆಲುವು

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2012, 19:30 IST
Last Updated 14 ಅಕ್ಟೋಬರ್ 2012, 19:30 IST

ಬೆಂಗಳೂರು: ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದ ಭಾರತ ತಂಡ ಚೀನಾದಲ್ಲಿ ನಡೆಯುತ್ತಿರುವ 9ನೇ ಏಷ್ಯನ್ ಯೂತ್ ಬಾಲಕಿಯರ ವಾಲಿಬಾಲ್ ಚಾಂಪಿಯನ್‌ಷಿಪ್‌ನ ಎರಡನೇ ಪಂದ್ಯದಲ್ಲಿ ಗೆಲುವು ಪಡೆಯಿತು.

ಶನಿವಾರ ನಡೆದ ಎರಡನೇ ಪಂದ್ಯದಲ್ಲಿ ಭಾರತ  30 (25-16, 25-21, 25-22) ಆಸ್ಟ್ರೇಲಿಯಾ ಎದುರು ಜಯ ಸಾಧಿಸಿತು. ಮೊದಲ ಪಂದ್ಯದಲ್ಲಿ ಭಾರತದವರು ಜಪಾನ್ ಎದುರು ನಿರಾಸೆ ಅನುಭವಿಸಿದ್ದರು ಎಂದು ಇಲ್ಲಿಗೆ ಬಂದಿರುವ ವರದಿಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.