ADVERTISEMENT

ವೇಟ್‌ಲಿಫ್ಟಿಂಗ್‌: ಕರಣ್‌ಬೀರ್‌ಗೆ ಮೂರು ಪದಕ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2014, 19:30 IST
Last Updated 8 ಮಾರ್ಚ್ 2014, 19:30 IST

ನವದೆಹಲಿ (ಪಿಟಿಐ): ಕರಣ್‌ಬೀರ್‌ ಸಿಂಗ್‌ ಬಾಲ್‌ ಇಲ್ಲಿ ಕೊನೆಗೊಂಡ 16ನೇ ಏಷ್ಯನ್‌ ಯೂತ್‌ ವೇಟ್‌ ಲಿಫ್ಟಿಂಗ್‌ ಚಾಂಪಿಯನ್‌ ಷಿಪ್‌ನಲ್ಲಿ ಒಂದು ಬೆಳ್ಳಿ ಮತ್ತು ಎರಡು ಕಂಚು ಸೇರಿದಂತೆ ಒಟ್ಟು ಮೂರು ಪದಕ ಪಡೆದುಕೊಂಡಿದ್ದಾರೆ.

ಅಂತರರಾಷ್ಟ್ರೀಯ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಪಾಲ್ಗೊಂ ಡಿದ್ದ ಕರಣ್‌ಬೀರ್‌ ಬಾಲಕರ 90 ಕೆಜಿ ವಿಭಾಗದ 127 ಕೆಜಿ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ 153 ಮತ್ತು 280 ಕೆಜಿ ವಿಭಾಗಗಳಲ್ಲಿ ಕಂಚಿನ ಪದಕ ಗೆದ್ದುಕೊಂಡರು.

ಚಾಂಪಿಯನ್‌ಷಿಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತದ ಒಬ್ಬ ಬಾಲಕ ಹಾಗೂ ಬಾಲಕಿ ಚೀನಾದ ನಾಂಜಿಂಗ್‌ನಲ್ಲಿ ಆಗಸ್ಟ್‌ನಲ್ಲಿ ನಡೆ ಯಲಿರುವ ಯೂತ್‌ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.