
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಚುರುಕಿನ ಪ್ರದರ್ಶನ ನೀಡುತ್ತಿರುವ ಭಾರತದ ವಿಕಾಸ್ ಠಾಕೂರು ಥಾಯ್ಲೆಂಡ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಜೂನಿಯರ್ ವೇಟ್ ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಮೂರು ಪದಕ ಜಯಿಸಿದ್ದಾರೆ.
ಎರಡನೇ ದಿನವಾದ ಶನಿವಾರ ನಡೆದ ಸ್ಪರ್ಧೆಗಳಲ್ಲಿ ವಿಕಾಸ್ 77 ಕೆ.ಜಿ. ವಿಭಾಗದಲ್ಲಿ ಪದಕ ಜಯಿಸಿದರು. ಸ್ನ್ಯಾಚ್ ಹಾಗೂ ಜರ್ಕ್ ವಿಭಾಗದಲ್ಲಿ (133+151=284) ಭಾರ ಎತ್ತಿ ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕ ಜಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.