ADVERTISEMENT

ಶೂಟಿಂಗ್: ಭಾರತ ಬಂಗಾರದ ಸಾಧನೆ

​ಪ್ರಜಾವಾಣಿ ವಾರ್ತೆ
Published 14 ಜೂನ್ 2013, 19:59 IST
Last Updated 14 ಜೂನ್ 2013, 19:59 IST

ನವದೆಹಲಿ (ಪಿಟಿಐ): ಯುವ ಶೂಟರ್ ಮಲೈಕಾ ಗೋಯೆಲ್ ಜೆಕ್ ಗಣರಾಜ್ಯದ ಪ್ಲೆಜನ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಶೂಟಿಂಗ್ ಚಾಂಪಿಯನ್‌ಷಿಪ್‌ನ ವೈಯಕ್ತಿಕ ಪಿಸ್ತೂಲ್ ವಿಭಾಗದಲ್ಲಿ ಬಂಗಾರ ಗೆದ್ದುಕೊಂಡರು.

ಮಲೈಕಾ ಅರ್ಹತಾ ಸುತ್ತಿನಲ್ಲಿ 381 ಪಾಯಿಂಟ್‌ಗಳನ್ನು ಕಲೆ ಹಾಕಿದರೆ, ಫೈನಲ್ ಸುತ್ತಿನಲ್ಲಿ ಅವರು 201 ಗಳಿಸಿದರು. ಈ ಟೂರ್ನಿಯಲ್ಲಿ ಭಾರತಕ್ಕೆ ಒಂದು ಚಿನ್ನ, ಎರಡು ಬೆಳ್ಳಿ ಮತ್ತು ಒಂದು ಕಂಚು ಲಭಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.