ADVERTISEMENT

ಶ್ರೀನಿವಾಸನ್‌ಗೆ ಮತ್ತೆ ಅಧ್ಯಕ್ಷ ಸ್ಥಾನ?

ಐಪಿಎಲ್ ಸ್ಪಾಟ್ ಫಿಕ್ಸಿಂಗ್

​ಪ್ರಜಾವಾಣಿ ವಾರ್ತೆ
Published 28 ಜುಲೈ 2013, 13:32 IST
Last Updated 28 ಜುಲೈ 2013, 13:32 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಲ್ಕತ್ತಾ (ಪಿಟಿಐ) : ಆರನೇ ಅವತರಿಣಿಕೆಯ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಹಗರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ತಂಡಗಳು ಭಾಗಿಯಾಗಿರುವುದಕ್ಕೆ ಯಾವುದೇ ಸಾಕ್ಷಿ ಇಲ್ಲ ಎಂದು ಅವ್ಯವಹಾರದ ತನಿಖೆ ನಡೆಸಿದ ಇಬ್ಬರು ನಿವೃತ್ತ ನ್ಯಾಯಮೂರ್ತಿಗಳು ವರದಿ ಸಲ್ಲಿಸಿದ್ದಾರೆ. ಇದರಿಂದಾಗಿ ಎನ್ ಶ್ರೀನಿವಾಸನ್ ಮತ್ತೆ ಬಿಸಿಸಿಐ ಅಧ್ಯಕ್ಷ ಹುದ್ದೆಗೇರುವ ಎಲ್ಲಾ ಸಾಧ್ಯತೆಗಳು ಹೆಚ್ಚಿವೆ.

ಪ್ರಕರಣ ಸಂಬಂಧ 'ಗುರುನಾಥ್ ಮೇಯಪ್ಪನ್ ಮತ್ತು ರಾಜ್ ಕುಂದ್ರಾ ಅವರ ವಿರುದ್ಧದ ಆರೋಪ ಸಾಬೀತುಪಡಿಸಲು ಯಾವುದೇ ಸಾಕ್ಷಿಗಳಿಲ್ಲ ಎಂಬ' ತನಿಖಾ ವರದಿಯನ್ನು ಬಿಸಿಸಿಐ ಕಾರ್ಯಕಾರಿಣಿ ಸಮಿತಿಗೆ ಭಾನುವಾರ ಸಲ್ಲಿಸಿದರು.

ತನಿಖಾ ವರದಿಯನ್ನು ಐಪಿಎಲ್ ಆಡಳಿತ ಮಂಡಳಿಗೆ ಕಳುಹಿಸಲಾಗುವುದು. ನವದೆಹಲಿಯಲ್ಲಿ ಅಗಸ್ಟ್ 2 ರಂದು ನಡೆಯಲಿರುವ ಐಪಿಎಲ್ ಅಡಳಿತ ಸಭೆಯಲ್ಲಿ ಅಂತಿಮ ನಿರ್ಧಾರ ಹೊರಬೀಳಲಿದೆ' ಎಂದು ಬಿಸಿಸಿಐ ಉಪಾಧ್ಯಕ್ಷ ನಿರಂಜನ್ ಶಾ ವರದಿಗಾರರಿಗೆ ತಿಳಿಸಿದರು.

ಈ ಹಿನ್ನೆಲೆಯಲ್ಲಿ ಶ್ರೀನಿವಾಸನ್ ಶೀಘ್ರವೇ ಮತ್ತೆ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಮರಳುವ ಸಾಧ್ಯತೆ ವ್ಯಕ್ತಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.