ADVERTISEMENT

ಸರಣಿ ಗೆಲುವು ನಮ್ಮಗುರಿ: ಬ್ರೆಸ್ನನ್

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2011, 19:30 IST
Last Updated 2 ಸೆಪ್ಟೆಂಬರ್ 2011, 19:30 IST

ಲಂಡನ್ (ಪಿಟಿಐ): ಟೆಸ್ಟ್ ರ‌್ಯಾಂಕಿಂಗ್‌ನಲ್ಲಿ ಅಗ್ರಸ್ಥಾನ ಪಡೆದಿರುವ ನಮ್ಮ ತಂಡ ಈಗ ಏಕದಿನ ಸರಣಿಯನ್ನು 5-0ರಲ್ಲಿ ಕೈವಶ ಮಾಡಿಕೊಳ್ಳುವ ಗುರಿ ಹೊಂದಿದೆ ಎಂದು ಇಂಗ್ಲೆಂಡ್‌ನ ಆರಂಭಿಕ ಆಟಗಾರ ಟಿಮ್ ಬ್ರೆಸ್ನನ್ ಹೇಳಿದ್ದಾರೆ.

ಟೆಸ್ಟ್ ಸರಣಿಯನ್ನು `ಕ್ಲೀನ್ ಸ್ವೀಪ್~ ಮಾಡಿರುವ ಇಂಗ್ಲೆಂಡ್ ಏಕದಿನ ಸರಣಿಯಲ್ಲಿ ಇದೇ ಫಲಿತಾಂಶವನ್ನು ಪುನರಾವರ್ತಿಸುತ್ತಿದೆ. ಪ್ರವಾಸಿ ತಂಡವನ್ನು ಇಲ್ಲಿಯು ಮಣಿಸುವ ಗುರಿ ಹೊಂದಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹತ್ತನೇ ವಿಶ್ವಕಪ್‌ನಲ್ಲಿ ಚಾಂಪಿಯನ್ ಆಗಿರುವ ಭಾರತ ತಂಡ ಪ್ರಬಲವಾಗಿ ಗಾಯಾಳುಗಳ ಸಮಸ್ಯೆ ಎದುರಿಸುತ್ತಿದೆ. ಆದ್ದರಿಂದ ಆ ತಂಡವನ್ನು ಏಕದಿನ ಸರಣಿಯಲ್ಲಿಯೂ ಮಣಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು.

ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಹರಭಜನ್ ಸಿಂಗ್ ಹಾಗೂ ಜಹೀರ್ ಖಾನ್, ಗೌತಮ್ ಗಂಭೀರ್ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರಗುಳಿದಿದ್ದಾರೆ. ಆದ್ದರಿಂದ ಪ್ರವಾಸಿ ತಂಡಕ್ಕೆ ಅನುಭವಿಗಳ ಕೊರತೆಯಿದೆ ಎಂದು ಬ್ರೆಸ್ನನ್ ಅಭಿಪ್ರಾಯ ಪಟ್ಟಿದ್ದಾರೆ. `ಭಾರತ ಉತ್ತಮ ತಂಡ. ಅದರಲ್ಲಿ ಅನುಮಾನವೇ ಬೇಡ. ಆದರೆ ಇಂಗ್ಲೆಂಡ್ ನೆಲದಲ್ಲಿ ಉತ್ತಮ ಪ್ರದರ್ಶನ ನೀಡಲು ಭಾರತಕ್ಕೆ ಕಷ್ಟವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.