ನವದೆಹಲಿ: ಸಿಂಗಲ್ಸ್ ವಿಭಾಗದ ಭರವಸೆ ಎನಿಸಿರುವ ಸೈನಾ ನೆಹ್ವಾಲ್, ಪಿ.ವಿ. ಸಿಂಧು ಮತ್ತು ಪರುಪಳ್ಳಿ ಕಶ್ಯಪ್ ಅವರು ಮಂಗಳವಾರ ಇಲ್ಲಿ ಆರಂಭವಾಗಲಿರುವ ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸವಾಲನ್ನು ಮುನ್ನಡೆಸಲಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಪರ್ಧಿಗಳು ಇತ್ತೀಚಿಗೆ ಅಮೋಘ ಪ್ರದರ್ಶನ ತೋರುತ್ತಿ ದ್ದಾರೆ. ಆದ್ದರಿಂದ ಆತಿಥೇಯ ರಾಷ್ಟ್ರದ ಸ್ಪರ್ಧಿಗಳ ಮೇಲೆ ಭರವಸೆ ಹೆಚ್ಚಿದೆ. ಸಿರಿ ಫೋರ್ಟ್ ಕ್ರೀಡಾ ಸಂಕೀರ್ಣದಲ್ಲಿ ಪಂದ್ಯಗಳು ನಡೆಯ ಲಿವೆ. 2010ರಲ್ಲಿ ಇಲ್ಲಿ ಪ್ರಶಸ್ತಿ ಜಯಿಸಿದ್ದ ಸೈನಾ ಈ ಬಾರಿ ಉತ್ತಮ ಪ್ರದರ್ಶನ ತೋರುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಾರಿಯ ಟೂರ್ನಿಯ ಬಹುಮಾನ ಮೊತ್ತ ಹೆಚ್ಚಳ ಮಾಡ ಲಾಗಿದೆ. ಮೊದಲು ₨ 1.2 ಕೋಟಿ ಯಿಂದ ₨ 1.5 ಕೋಟಿಗೆ ಹೆಚ್ಚಿಸಲಾಗಿದೆ. ‘ಗಾಯದಿಂದ ಪೂರ್ಣವಾಗಿ ಚೇತರಿಸಿಕೊಂಡಿದ್ದೇನೆ. ಇಲ್ಲಿ ಉತ್ತಮ ಪ್ರದರ್ಶನ ತೋರುತ್ತೇನೆ’ ಎಂದು ವಿಶ್ವ ಕ್ರಮಾಂಕದಲ್ಲಿ ಎಂಟನೇ ಸ್ಥಾನ ಹೊಂದಿರುವ ಹೈದರಾಬಾದ್‌ನ ಸೈನಾ ನುಡಿದರು.
ಪುರುಷರ ವಿಭಾಗದ ಸಿಂಗಲ್ಸ್‌ನಲ್ಲಿ ಕೆ. ಶ್ರೀಕಾಂತ್, ಸೌರಭ್ ವರ್ಮಾ, ಎಚ್.ಎಸ್. ಪ್ರಣಯ್, ಬೆಂಗಳೂರಿನ ಅರವಿಂದ್ ಭಟ್ ಅವರು ಟೂರ್ನಿಯಲ್ಲಿ ಪಾಲ್ಗೊಂಡಿರುವ ಭಾರತದ ಪ್ರಮುಖ ಸ್ಪರ್ಧಿಗಳು. ಡಬಲ್ಸ್‌ನಲ್ಲಿ ಅಶ್ವಿನಿ ಪೊನ್ನಪ್ಪ ಕಣಕ್ಕಿಳಿಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.