ಕ್ಯಾನ್‌ಬೆರಾ (ಪಿಟಿಐ): ಅಮೋಘ ಪ್ರದರ್ಶನ ತೋರುವ ಮೂಲಕ ಗಮನ ಸೆಳೆದಿದ್ದ ಭಾರತದ ದೀಪಿಕಾ ಪಲ್ಲಿಕಲ್ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯನ್ ಓಪನ್ ಸ್ಕ್ವಾಷ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಸೋಲು ಕಂಡಿದ್ದಾರೆ.
ನ್ಯಾಷನಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ಶನಿವಾರ ನಡೆದ ನಾಲ್ಕರ ಘಟ್ಟದ ಪಂದ್ಯದಲ್ಲಿ ದೀಪಿಕಾ 7-11, 11-7, 11-13, 11-3, 9-11ರಲ್ಲಿ ಇಂಗ್ಲೆಂಡ್‌ನ ಲಾರಾ ಮಸಾರೊ ಎದುರು ಪರಾಭವಗೊಂಡರು. ಆದರೆ ವಿಶ್ವದ ನಾಲ್ಕನೇ ರ‌್ಯಾಂಕ್‌ನ ಆಟಗಾರ್ತಿ ಲಾರಾಗೆ ಕಠಿಣ ಪೈಪೋಟಿ ನೀಡುವಲ್ಲಿ ಯಶಸ್ವಿಯಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.