
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಇತ್ತೀಚೆಗಷ್ಟೇ ಅಂತರರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ ವಿಶ್ವದ ಶ್ರೇಷ್ಠ ಟೆಸ್ಟ್ ನಾಯಕ ಎಂದು ಭಾರತ ತಂಡದ ಮಾಜಿ ಕೋಚ್ ಗ್ಯಾರಿ ಕಸ್ಟರ್ನ್ ಅಭಿಪ್ರಾಯಪಟ್ಟಿದ್ದಾರೆ.
‘ನನ್ನ ಪ್ರಕಾರ ಸ್ಮಿತ್ ವಿಶ್ವ ಕಂಡಂತಹ ಟೆಸ್ಟ್ ಕ್ರಿಕೆಟ್‌ನ ಶ್ರೇಷ್ಠ ನಾಯಕ. ಟೆಸ್ಟ್‌ನಲ್ಲಿ ಅವರಷ್ಟು ದೀರ್ಘಕಾಲ ತಂಡವನ್ನು ಮುನ್ನಡೆ ಸಿದ ಬೇರೊಬ್ಬರಿಲ್ಲ ಎಂಬುದು ನನ್ನ ಭಾವನೆ. ಅವರು ತಮ್ಮ ನಾಯಕತ್ವ ದಲ್ಲಿ ತಂಡವನ್ನು ಯಶಸ್ಸಿನ ಉತ್ತುಂಗಕ್ಕೆ ಕೊಂಡೊಯ್ದಿದ್ದಾರೆ’ ಎಂದು ಕಸ್ಟರ್ನ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.