ADVERTISEMENT

ಸ್ಯಾಫ್‌ ಕಪ್‌ ಫುಟ್‌ಬಾಲ್‌ ‘ಬಿ’ ಗುಂಪಿನಲ್ಲಿ ಭಾರತ

ಪಿಟಿಐ
Published 18 ಏಪ್ರಿಲ್ 2018, 19:30 IST
Last Updated 18 ಏಪ್ರಿಲ್ 2018, 19:30 IST

ನವದೆಹಲಿ: ಭಾರತ ತಂಡದವರು ಮುಂಬರುವ ಸ್ಯಾಫ್‌ ಕಪ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ‘ಬಿ’ ಗುಂಪಿನಲ್ಲಿ ಆಡಲಿದ್ದಾರೆ.

ಮಾಲ್ಡೀವ್ಸ್‌ ಮತ್ತು ಶ್ರೀಲಂಕಾ ತಂಡಗಳೂ ಇದೇ ಗುಂಪಿನಲ್ಲಿವೆ. ಆತಿಥೇಯ ಬಾಂಗ್ಲಾದೇಶ, ನೇಪಾಳ, ಭೂತಾನ್‌ ಮತ್ತು ಪಾಕಿಸ್ತಾನ ತಂಡಗಳು ‘ಎ’ ಗುಂಪಿನಲ್ಲಿ ಸ್ಥಾನ ಗಳಿಸಿವೆ.

ಸ್ಯಾಫ್‌ ಸುಜುಕಿ ಕಪ್‌ ಟೂರ್ನಿ ಸೆಪ್ಟೆಂಬರ್‌ 4ರಿಂದ 15ರವರೆಗೆ ಬಾಂಗ್ಲಾದೇಶದಲ್ಲಿ ನಡೆಯಲಿದೆ. ಭಾರತ ತಂಡ ಟೂರ್ನಿಯಲ್ಲಿ ಒಟ್ಟು ಏಳು ಪ್ರಶಸ್ತಿಗಳನ್ನು ಜಯಿಸಿದ್ದು ಮೂರು ಬಾರಿ ರನ್ನರ್ಸ್‌ ಅಪ್‌ ಸಾಧನೆ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.