ಲಂಡನ್: ಪಾಕಿಸ್ತಾನ ವಿರುದ್ಧ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಪರಾಭವಗೊಂಡು ನಿರಾಸೆ ಮೂಡಿಸಿದರೆ ಇತ್ತ ಹಾಕಿ ವಿಶ್ವ ಲೀಗ್ ಸೆಮಿಫೈನಲ್‌ನ ಪೂಲ್ ಬಿ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 7- 1 ಅಂತರದಲ್ಲಿ ಪರಾಭವಗೊಳಿಸಿ ಗೆಲುವಿನ ನಗೆ ಬೀರಿದೆ.
ಭಾರತದ ಕ್ರೀಡಾಭಿಮಾನಿಗಳು ಕ್ರಿಕೆಟ್ ಪಂದ್ಯದ ಬಗ್ಗೆ ತಲೆಕೆಡಿಸಿಕೊಂಡಿರುವಾಗ ಲಂಡನ್‍ನಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಭಾರತೀಯ ಹಾಕಿ ತಂಡ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಸಂತಸ ತಂದಿದೆ.
ಈ ಪಂದ್ಯಾವಳಿಯಲ್ಲಿ ಭಾರತ ಸತತವಾಗಿ ಮೂರನೇ ಬಾರಿ ಜಯಗಳಿಸಿದ್ದು, ಪೂಲ್ ಬಿ ಗುಂಪಿನಲ್ಲಿ ಮೊದಲ ಸ್ಥಾನದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.