ADVERTISEMENT

ಹಾಕಿ: ಎಂಇಜಿ ತಂಡಕ್ಕೆ ಗೆಲುವು

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2013, 18:07 IST
Last Updated 2 ಏಪ್ರಿಲ್ 2013, 18:07 IST
ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಲೀಗ್ ಹಾಕಿ ಟೂರ್ನಿಯ ಪಂದ್ಯದಲ್ಲಿ ಎಸ್‌ಎಐ ತಂಡದ ನಿಕಿನ್ ತಿಮ್ಮಯ್ಯ ಅವರು ಬಾರಿಸಿದ ಚೆಂಡನ್ನು ಎಂಇಜಿ ತಂಡದ ಕೆ.ಬಿ.ತಿಮ್ಮಯ್ಯ ತಡೆಯಲು ಪ್ರಯತ್ನಿಸಿದರು  -ಪ್ರಜಾವಾಣಿ ಚಿತ್ರ.
ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಲೀಗ್ ಹಾಕಿ ಟೂರ್ನಿಯ ಪಂದ್ಯದಲ್ಲಿ ಎಸ್‌ಎಐ ತಂಡದ ನಿಕಿನ್ ತಿಮ್ಮಯ್ಯ ಅವರು ಬಾರಿಸಿದ ಚೆಂಡನ್ನು ಎಂಇಜಿ ತಂಡದ ಕೆ.ಬಿ.ತಿಮ್ಮಯ್ಯ ತಡೆಯಲು ಪ್ರಯತ್ನಿಸಿದರು -ಪ್ರಜಾವಾಣಿ ಚಿತ್ರ.   

ಬೆಂಗಳೂರು: ಮೊದಲ ಪಂದ್ಯದಲ್ಲಿ ಎಎಸ್‌ಸಿ ಎದುರು ಗೆಲುವು ಪಡೆದಿದ್ದ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) ತಂಡ ಕೆಎಸ್‌ಎಚ್‌ಎ ಆಶ್ರಯದಲ್ಲಿ ನಡೆಯುತ್ತಿರುವ `ಓಜೋನ್ ಗ್ರೂಪ್' ರಾಷ್ಟ್ರೀಯ ಹಾಕಿ ಲೀಗ್ ಚಾಂಪಿಯನ್‌ಷಿಪ್‌ನಲ್ಲಿ ಮತ್ತೊಂದು ಗೆಲುವು ದಾಖಲಿಸಿತು.

ಅಕ್ಕಿ ತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಎಂಇಜಿ 2-1ಗೋಲುಗಳಿಂದ ಭಾರತ ಕ್ರೀಡಾ ಪ್ರಾಧಿಕಾರ ತಂಡವನ್ನು ಮಣಿಸಿತು. ಕ್ರೀಡಾ ಪ್ರಾಧಿಕಾರದ ನಿಕಿನ್ ತಿಮ್ಮಯ್ಯ 19ನೇ ನಿಮಿಷದಲ್ಲಿ ಗೋಲು ಗಳಿಸಿದ್ದರಿಂದ ಈ ತಂಡ ಆರಂಭಿಕ ಮುನ್ನಡೆ ಸಾಧಿಸಿತು. ಆದರೆ, ಎಂಇಜಿ ತಂಡದ ರಾಬಿನ್ 41ನೇ ನಿಮಿಷದಲ್ಲಿ ಗೋಲು ತಂದಿತ್ತು 1-1ರಲ್ಲಿ ಸಮಬಲ ಸಾಧಿಸಿದರು. ಇದೇ ಆಟಗಾರ 68ನೇ ನಿಮಿಷದಲ್ಲಿ ಇನ್ನೊಂದು ಗೋಲು ಗಳಿಸಿ ಗೆಲುವಿನ ರೂವಾರಿ ಎನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.