ADVERTISEMENT

ಹಾಕಿ: ಎಸ್‌ಎಐ ಬಿ ತಂಡಕ್ಕೆ ವಿಜಯ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2011, 19:30 IST
Last Updated 25 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ವಿನಾಯಕ ಹಾಗೂ ಅಶೋಕ್ ಗಳಿಸಿದ ತಲಾ ಎರಡು ಗೋಲುಗಳ ನೆರವಿನಿಂದ ಭಾರತೀಯ ಕ್ರೀಡಾ ಪ್ರಾಧಿಕಾರ `ಬಿ~ (ಎಸ್‌ಎಐ) ತಂಡದವರು ಕೆಎಸ್‌ಎಚ್‌ಎ ಆಶ್ರಯದಲ್ಲಿ ಇಲ್ಲಿ ನಡೆಯುತ್ತಿರುವ ರಾಜ್ಯ `ಎ~ ಡಿವಿಷನ್ ಹಾಕಿ ಲೀಗ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಗೆಲುವು ಪಡೆದರು.

ಅಕ್ಕಿ ತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಎಸ್‌ಎಐ ತಂಡ 5-0ಗೋಲುಗಳಿಂದ ಬಿಎಸ್‌ಎನ್‌ಎಲ್ ತಂಡವನ್ನು ಸುಲಭವಾಗಿ ಮಣಿಸಿತು.

ವಿಜಯಿ ತಂಡದ ರಮೇಶ್ 3ನೇ ನಿಮಿಷದಲ್ಲಿ ಗೋಲಿನ ಖಾತೆ ತೆರೆದರು. ವಿನಾಯಕ್ (7 ಹಾಗೂ 39), ಅಶೋಕ್ (14 ಹಾಗೂ 19) ಗೋಲು ಕಲೆ ಹಾಕಿ ಅಂತರದ ಗೆಲುವು ಪಡೆಯಲು ಕಾರಣರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.