
ಪ್ರಜಾವಾಣಿ ವಾರ್ತೆಬೆಂಗಳೂರು: ಕರ್ನಾಟಕ ಮಹಿಳಾ ತಂಡದವರು ಆಂಧ್ರ ಪ್ರದೇಶದ ಕಾಕಿನಾಡದಲ್ಲಿ ನಡೆಯುತ್ತಿರುವ ಹಾಕಿ ಇಂಡಿಯಾ ದಕ್ಷಿಣ ವಲಯ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ.
ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ 1-0 ಗೋಲುಗಳಿಂದ ಆತಿಥೇಯ ಆಂಧ್ರ ಪ್ರದೇಶ ತಂಡವನ್ನು ಸೋಲಿಸಿ ಪ್ರಶಸ್ತಿ ಹಂತಕ್ಕೆ ಹೆಜ್ಜೆ ಹಾಕಿದೆ. ಕುಲ್ಸಂಬಿ 60ನೇ ನಿಮಿಷದಲ್ಲಿ ಗೋಲು ಗಳಿಸಿ ಕರ್ನಾಟಕದ ಗೆಲುವಿನ ರೂವಾರಿ ಎನಿಸಿದರು. ಭಾನುವಾರದ ಫೈನಲ್‌ನಲ್ಲಿ ಕರ್ನಾಟಕವು ತಮಿಳುನಾಡು ವಿರುದ್ಧ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದೆ ಎಂದು ಇಲ್ಲಿಗೆ ಬಂದ ವರದಿಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.